Friday, 22nd November 2024

ಮೋದಿ ಬಜೆಟ್‌ ಭಾಷಣ: ಕೆಲವೇ ನಿಮಿಷಗಳಲ್ಲಿ…

ನವದೆಹಲಿ: ಫೆಬ್ರವರಿ 2 ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ.

ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ ಜನರನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿಯವರ ಭಾಷಣ ಇದೆ.

ಪ್ರಧಾನಿಯವರು ತಮ್ಮ ಭಾಷಣದಲ್ಲಿ ಕೇಂದ್ರ ಬಜೆಟ್ 2022 ಕುರಿತು ಮಾತನಾಡಲಿದ್ದಾರೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಭಾಷಣ ವನ್ನು ಜನರು ಆಲಿಸಲು ದೇಶದ ಹಲವು ಜಿಲ್ಲೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಸ್ಥಾಪಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ 7 ಹಂತಗಳ ವಿಧಾನಸಭಾ ಚುನಾವಣೆ, ಫೆಬ್ರವರಿ 27 ರಿಂದ ಮಣಿಪುರ ಎರಡು ಹಂತಗಳಲ್ಲಿ ಮತ್ತು ಪಂಜಾಬ್, ಗೋವಾ ಮತ್ತು ಉತ್ತರಾಖಂಡ್ ಫೆಬ್ರವರಿ 14 ರಂದು ಚುನಾವಣೆ ಗಳನ್ನು ಎದುರಿಸಲಿದೆ. ಈ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.