ಫೆ.4ರಂದು ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಫೆಬ್ರವರಿ 14ರಂದು ನಡೆಯುವ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಫೆ. 3ರಂದು ರಾಹುಲ್ ಗಾಂಧಿ ಛತ್ತೀಸ್ಗಢ್ಗೆ ಭೇಟಿ ನೀಡಲಿದ್ದಾರೆ. ಫೆ.4ರಂದು ಗೋವಾಕ್ಕೆ ಭೇಟಿ ನೀಡಲಿದ್ದು ಪ್ರವಾಸೋದ್ಯಮ ಕ್ಷೇತ್ರದ ಜನರ ಜೊತೆ, ಅಂಗನವಾಡಿ ಕಾರ್ಯಕರ್ತೆ ಯರ ಜೊತೆ ಸಂವಾದ ನಡೆಸಲಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆಗೆ ಕಣದಲ್ಲಿರುವ 37 ಕ್ಷೇತ್ರಗಳ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ರಾಜ್ಯದ 40 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 37ರಲ್ಲಿ ಕಣಕ್ಕಿಳಿದಿದ್ದು, 3 ಸ್ಥಾನಗಳನ್ನು ಜಿಎಫ್ಪಿ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ರಾಹುಲ್ ಗಾಂಧಿ ಗೋವಾ ಭೇಟಿ ಸಂದರ್ಭದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಪಕ್ಷ ನಿಷ್ಠ ಪ್ರತಿಜ್ಞೆ ಮಾಡಬೇಕಿದೆ.
2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿ 17 ಶಾಸಕರು ಆಯ್ಕೆಯಾದರು. ಆದರೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿಲ್ಲ. ಇದಕ್ಕೆ ಪಕ್ಷಾಂತರವೇ ಪ್ರಮುಖ ಕಾರಣವಾ ಯಿತು. ಈ ಹಿನ್ನಲೆಯಲ್ಲಿ ಈ ವರ್ಷದ ಚುನವಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಂದ ಪಕ್ಷ ನಿಷ್ಠೆಯ ಪ್ರತಿಜ್ಞೆ ಮಾಡಿಸಿಕೊಳ್ಳಲಾಗುತ್ತಿದೆ.
40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆ.14ರಂದು ಚುನಾವಣೆ ನಡೆಯಲಿದೆ. ಅಂತಿಮವಾಗಿ 301 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21.