ನವದೆಹಲಿ: ಒಂದು ವಾರದವರೆಗೆ ಪಂಜಾಬ್ ಶಾಸಕ ಸಿಮರ್ಜೀತ್ ಸಿಂಗ್ ಬೇಯ್ನ್ಸ್ ಅವರನ್ನು ಬಂಧಿಸದಂತೆ ಪಂಜಾಬ್ ಪೊಲೀಸರಿಗೆ ಸುಪ್ರೀಂಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಲೋಕ್ ಇನ್ಸಾಫ್ ಪಕ್ಷದ ಮುಖ್ಯಸ್ಥರೂ ಆಗಿರುವ ಸಿಂಗ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಸಿಂಗ್ ನ್ಯಾಯಾಲಯದೆದುರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಲೂಧಿಯಾನ ಕೋರ್ಟ್, ಬಂಧನ ವಾರೆಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ, ಸಿಂಗ್ ಸುಪ್ರೀಂ ಮೆಟ್ಟಿಲೇರಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಹಿಮಾ ಕೊಹ್ಲಿ ಅವರ ನ್ನೊಳಗೊಂಡ ಪೀಠ, ಸಿಂಗ್ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ದಾಖಲಿಸುವಂತೆಯೂ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ.