ನವದೆಹಲಿ: ದೇಶದಲ್ಲಿ ಶನಿವಾರ ಬೆಳಿಗ್ಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,27,952 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1059 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 5,01,114ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 2,30,814 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 40,24,7,902ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,98,17,199 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.