ಮುಂಬೈ : ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗೊಂದಿಗೆ ನಡೆಯಲಿದೆ.
ಲತಾ ಅವರ ಪಾರ್ಥಿವ ಶರೀರವನ್ನು ಕ್ಯಾಂಡಿ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡಯ್ಯಲಾಗುತ್ತಿದ್ದು, ಅಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.’ಗಾಯಕಿ ಲತಾ ಮಂಗೇಶ್ಕರ್ (92) ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.
ಲತಾ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.
ಲತಾ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು. ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.