ನವದೆಹಲಿ: ರಾಜ್ಯ ಸರ್ಕಾರದ ಬಿಜೆಪಿ ಸದಸ್ಯನ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂದಿದ್ದಾರೆ.
ಸೋಮವಾರ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದೆ. ಹೀಗಾಗಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಹಿನ್ನಡೆ ಉಂಟಾಗಿದೆ.
2019 ರಲ್ಲಿ ರಾಜ್ಯ ಸರ್ಕಾರ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಪ್ರಶ್ನಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ವಜಾಗೊಳಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.