ಮೊದಲ ಏಕದಿನ ಪಂದ್ಯ ಮುಗಿದಿದ್ದು, ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾದಲ್ಲಿ ಪ್ರಾಬಲ್ಯ ಸಾಧಿಸಿದ್ದ ಟೀಮ್ ಇಂಡಿಯಾ 6 ವಿಕೆಟ್ಗಳ ಅಮೋಘ ಗೆಲುವು ಕಂಡಿತ್ತು. ಪರಿಪೂರ್ಣ ನಾಯಕನಾಗಿ ತಂಡವನ್ನು ಏಕದಿನದಲ್ಲಿ ಮುನ್ನಡೆಸಿದ ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಯುಜ್ವೇಂದ್ರ ಚಹಲ್ ಮತ್ತು ವಾಷಿಂಗ್ಟನ್ ಸುಂದರ್ ಬೌಲಿಂಗ್ನಲ್ಲಿ ಸಂಚಲಸ ಸೃಷ್ಟಿಸಿದರು. ದೀಪಕ್ ಹೂಡ ಭರವಸೆ ಮೂಡಿಸಿದರು.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಫೆಬ್ರವರಿ 9 ರಂದುನಡೆಯಲಿದೆ. ಮೊದಲ ಪಂದ್ಯ ನಡೆದ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲೇ 2ನೇ ಏಕದಿನ ಕೂಡ ಜರುಗಲಿದೆ. ಮಧ್ಯಾಹ್ನ 1:30ಕ್ಕೆ ಆರಮಭವಾಗಲಿದೆ.
ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಸೋಮವಾರ ತಂಡವನ್ನು ಸೇರಿಕೊಂಡಿ ದ್ದಾರೆ. ಅವರು 3 ದಿನಗಳ ಕ್ವಾರಂಟೈನ್ ನಲ್ಲಿ ಇರುವುದರಿಂದ ದ್ವಿತೀಯ ಪಂದ್ಯದಲ್ಲೂ ಆಡುವುದು ಅನು ಮಾನ. ಮಾಯಾಂಕ್ ಅಗರ್ವಾಲ್ ಅವರ ಕ್ವಾರಂಟೈನ್ ಅವಧಿ ಕೂಡ ಮುಗಿದಿದೆ. ನವದೀಪ್ ಸೈನಿ ಕೋವಿಡ್ ಪಾಸಿಟಿವ್‌ನಿಂದ ಚೇತರಿಸಿಕೊಂಡಿದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಏಕದಿನ ಸರಣಿ ಮುಗಿದ ಬಳಿಕ ಟಿ20 ಸರಣಿಯ 3 ಪಂದ್ಯ ಗಳು ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಆಯೋಜನೆಯಾಗಿದೆ. ಕ್ರಮವಾಗಿ ಫೆಬ್ರವರಿ 16, ಫೆ. 18 ಮತ್ತು ಫೆ. 20 ರಂದು ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿ.ಕೀ), ದೀಪಕ್ ಚಹರ್, ಶಾರ್ದುಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ, ಆವೇಶ್ ಖಾನ್, ಇಶಾನ್ ಕಿಶನ್, ಶಾರುಖ್ ಖಾನ್, ಮಯಾಂಕ್ ಅಗರ್ವಾಲ್.
ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.