Saturday, 23rd November 2024

ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ

ಧಾರವಾಡ: ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶರಾದರು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕು ತಗುಲಿದ ಬಳಿಕ ಜನವರಿ 14ರಿಂದ ಅವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು.

ಕೋವಿಡ್‌ನಿಂದ ಗುಣಮುಖರಾದರೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದರು. ಅವರ ಶ್ವಾಸಕೋಶದ ಸೋಂಕು ಕಡಿಮೆಯಾಗಿಲ್ಲ.

ಬಳಿಕ ಮಾತನಾಡಿದ್ದ ಅವರು, “ಚಂಬೆಳಕಿನ ಕವಿ ನಮಗೆಲ್ಲರಿಗೂ ಬಹಳ ಆತ್ಮೀಯರು ಆತ್ಯಂತ ಮೃದು ಸ್ವಾಭಾವದ ವ್ಯಕ್ತಿ. ಚೆನ್ನವೀರ ಕಣವಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆದರೆ ವಯೋ ಸಹಜ ಕಾರಣದಿಂದಾಗಿ ಅವರ ಆರೋಗ್ಯದಲ್ಲಿ ತೀವ್ರ ತರದ ಚೇತರಿಕೆ ಕಾಣುತಿಲ್ಲ” ಎಂದು ಹೇಳಿದ್ದರು.

ಅವರ ಕುಟುಂಬದೊಂದಿಗೆ ತಮಗೆ ದೀರ್ಘ ಕಾಲದ ಆತ್ಮೀಯ ಒಡನಾಟ ಇದೆ. ಸರ್ಕಾರದ ವೆಚ್ಚ, ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಸ್‌ಡಿಎಂ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಶೀಘ್ರ ಗುಣಮುಖರಾಗಿ, ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿಯವರು ಹಾರೈಸಿದ್ದರು.

ಡಾ ಚೆನ್ನವೀರ ಕಣವಿ ಭಾವಜೀವಿ ಎಂದೇ ಖ್ಯಾತಿ ಪಡೆದಿದ್ದರು. ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದ್ದರು.

ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದ ಬಳಿಕ ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಡಾ. ಚೆನ್ನವೀರ ಕಣವಿ ಅವರ ಮೊದಲ ಕವಲ ಸಂಕಲನ ‘ಕಾವ್ಯಾಕ್ಷಿ’ 1949ರಲ್ಲಿ ಬಿಡುಗಡೆಗೊಂಡಿತು.

ಡಾ. ಚೆನ್ನವೀರ ಕಣವಿ ಸಾಹಿತ್ಯ ಸೇವೆಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದರು.