ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 60 ಕಿ.ಮೀಗಳಷ್ಟು ದೂರವಿರುವ ವಾಂಗೂ ತೇರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಬಾಂಬ್ ಸ್ಫೋಟಿಸಿತು ಎಂದು ಹೇಳಿದ್ದಾರೆ.
ಘಟನೆ ಸಂಭವಿಸಿದಾಗ ಐಟಿಬಿಟಿ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಇವರನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಉತ್ತರಾಖಂಡ್ ಮೂಲದವರಾದ ಈ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಇಂಫಾಲದ ಆಸ್ಪತ್ರೆ ಯೊಂದಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ವಿವರಿಸಿ ದ್ದಾರೆ.
ಮಣಿಪುರ ವಿಧಾನಸಭೆಗೆ ಫೆ.28 ಮತ್ತು ಮಾ.5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ.10ರಂದು ಮತಗಳ ಎಣಿಕೆ ನಡೆಯಲಿದೆ.