ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 13,166 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 302 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,28,94,345ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಡುವವರ ಸಂಖ್ಯೆ 5,13,226ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,34,235ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 26,988 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,22,46,884ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,76,86,89,266 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.