Monday, 6th January 2025

ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಚೆನ್ನೈ : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ರಾಜಸ್ಥಾನದ 26 ವರ್ಷದ ಯಶ್ ಪಾಲ್ ಟರ್ಮಿನಲ್‌ನಲ್ಲಿ ಟಾಯ್ಲೆಟ್ ಪ್ರದೇಶದಲ್ಲಿ ಎಸ್‌ಎಲ್‌ಆರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸು ತ್ತಿದ್ದಾರೆ.