Saturday, 23rd November 2024

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಕಲಬುರಗಿ,ಬೆಳಗಾವಿ ಎಂದು ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಲಾಗಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್, ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ. ಇದೆ.

ಕೃಷಿಗೆ 33,700 ಕೋಟಿ ರೂ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,478 ಕೋಟಿ ರೂ. ಬೆಂಗಳೂರು ಅಭಿವೃದ್ಧಿಗೆ8,409 ಕೋಟಿ ರೂ.ಮೀಸಲಿಡ ಲಾಗಿದೆ. ರಾಜ್ಯದಲ್ಲಿ ರೈತ ಶಕ್ತಿ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಈ ಯೋಜನೆ ಮೂಲಕ ರೈತರಿಗೆ ಯಂತ್ರೋಪಕರಣ ಉಪಯೋಗಕ್ಕೆ ಸಹಾಯಧನ, 250 ರೂ. ಡೀಸೆಲ್ ಸಹಾಯಧನ ನೀಡಲಾಗುವುದು. 500 ಕೋಟಿ ರೂ. ಯೋಜನೆಗೆ ಒದಗಿಸಲಾಗಿದೆ ಎಂದು ಹೇಳಿದ್ದಾರೆ.