Saturday, 23rd November 2024

ಆರು ಮಹಿಳಾ ವಿಶ್ವಕಪ್ ಟೂರ್ನಿ ಆಡಿದ ಮಿಥಾಲಿ ರಾಜ್‌

ಮೌಂಟ್‌ ಮ್ಯಾಗ್ನೂಯಿ: ನ್ಯೂಜಿಲ್ಯಾಂಡ್‌ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ ಟೂರ್ನಿಯ ಪಾಕ್‌ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿ ದಿರುವ ಭಾರತ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್‌ ಆರು ಮಹಿಳಾ ವಿಶ್ವಕಪ್ ಟೂರ್ನಿಗಳಲ್ಲಿ ಭಾಗವಹಿಸಿದ ಮೊಟ್ಟ ಮೊದಲ ಕ್ರಿಕೆಟ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮಿಥಾಲಿ ರಾಜ್ 2000, 2005, 2009, 2013, 2017 ಮತ್ತು 2022ನೇ ವಿಶ್ವಕಪ್‍ನಲ್ಲಿ ಭಾರತ ತಂಡದ ಪರ ಆಡಿದ ಸಾಧನೆ ಮಾಡಿದ್ದಾರೆ. ಇನ್ನೊರ್ವ ಆಟಗಾರ್ತಿ ಜೂಲನ್ ಗೋಸ್ವಾಮಿ ಸಹ ಇಂದಿನ ಪಂದ್ಯದಲ್ಲಿ ಆಡುತ್ತಿದ್ದು, ಐದು ವಿಶ್ವಕಪ್ ಟೂರ್ನಿಗಳಲ್ಲಿ ಕಣಕ್ಕಿಳಿಯುವ ಮೂಲಕ ಎರಡನೇ ಸ್ಥಾನಕ್ಕೇರಿದ್ದಾರೆ.

ಸಚಿನ್ ತೆಂಡೂಲ್ಕರ್ 1992, 1996, 1999, 2003, 2007 ಮತ್ತು 2011ರ ವಿಶ್ವಕಪ್‍ನಲ್ಲಿ ಪಾಲ್ಗೊಂಡಿದ್ದರು. ಮಿಥಾಲಿ ಹಾಗೂ ಸಚಿನ್ ಹೊರತುಪಡಿಸಿದರೆ ಪಾಕಿಸ್ತಾನದ ಜಾವೇದ್ ಮಿಯಾಂದಾದ್ ಮಾತ್ರ ಆರು ವಿಶ್ವಕಪ್‍ಗಳಲ್ಲಿ ಆಡಿದ್ದಾರೆ.

ನಾಯಕತ್ವದಲ್ಲಿಯೂ ಸಹ ಮಿಥಾಲಿ ಹೊಸ ದಾಖಲೆ ಬರೆದಿದ್ದು, ನಾಲ್ಕು ವಿಶ್ವಕಪ್‌ ನಲ್ಲಿ ತಂಡವನ್ನು ಮುನ್ನಡೆಸಿದ ಎರಡನೇ ಆಟಗಾರ್ತಿ ಎನಿಸಿ ದ್ದಾರೆ. ಈ ಮೊದಲು ಆಸ್ಟ್ರೇಲಿಯಾದ ಕ್ರಿಕೆಟ್‌ ದಂತಕಥೆ ಬೆಲಿಂಡಾ ಕ್ಲಾರ್ಕ್ ನಾಲ್ಕು ವಿಶ್ವಕಪ್‌ ಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.