ನವದೆಹಲಿ: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಗಳನ್ನು ಕೋರಿದ್ದು, ‘ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.
‘ಮಹಿಳಾ ದಿನದಂದು, ನಮ್ಮ ನಾರಿ ಶಕ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಗಳನ್ನು ಸೆಲ್ಯೂಟ್ ಮಾಡುತ್ತೇನೆ. ಭಾರತ ಸರ್ಕಾರವು ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ತನ್ನ ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀ ಕರಿಸುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಭಾರತದ ಅಭಿವೃದ್ಧಿ ಪಯಣದಲ್ಲಿ ಮಹಿಳೆಯರನ್ನು ಮುಂಚೂಣಿಗೆ ತರಲು ಹಲವು ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನಾರಿ ಶಕ್ತಿಯನ್ನು ಭಾರತದ ಅಭಿವೃದ್ಧಿ ಪಯಣದಲ್ಲಿ ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಇನ್ನೂ ಹೆಚ್ಚಿನ ಹುರುಪಿನಿಂದ ಮುಂದುವರಿಯಲಿವೆ’ ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಕಚ್‌ನ ಧೋರ್ಡೊದಲ್ಲಿ ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಿಳಾ ಸಂತರ ಶಿಬಿರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಮಹಿಳಾ ಸಬಲೀಕರಣಕ್ಕೆ ಅವರ ಕೊಡುಗೆಯನ್ನು ಗುರುತಿಸಲು ಈ ವಿಚಾರ ಸಂಕಿರಣ ವನ್ನು ಆಯೋಜಿಸಲಾಗಿದೆ. 500 ಕ್ಕೂ ಹೆಚ್ಚು ಮಹಿಳೆಯರು ಧೋರ್ಡೊದಲ್ಲಿ ಸೆಮಿನಾರ್‌ನಲ್ಲಿ ಭಾಗವಹಿಸಲಿದ್ದಾರೆ.