Saturday, 23rd November 2024

ಮಾ.27ರಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭ

ನವದೆಹಲಿ: ಮಾ.27ರಿಂದ ಸಾಮಾನ್ಯ ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಆರಂಭಿಸ ಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಎರಡು ವರ್ಷಗಳ ಬಳಿಕ ಸಾಮಾನ್ಯ ಅಂತರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಆರಂಭಿಸುವುದಾಗಿ ಸರ್ಕಾರ ಹೇಳಿದೆ.

ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ವಿಶೇಷ ವಿಮಾನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.

ಮಾ.27ರಿಂದ ಭಾರತದ ವಿಮಾನ ನಿಲ್ದಾಣದಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ, ಲ್ಯಾಂಡಿಂಗ್‌ಗೆ ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಂಗಳ ವಾರ ಹೇಳಿದೆ.

ಮಂಗಳವಾರ ಭಾರತದಲ್ಲಿ 3,993 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 24 ಗಂಟೆಯಲ್ಲಿ 108 ಜನರು ಮೃತಪಟ್ಟಿದ್ದಾರೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 49,948 ಆಗಿದೆ.

ಭಾರತ ಮತ್ತು ಇತರ 40 ದೇಶಗಳ ನಡುವೆ ವಿಶೇಷ ವಿಮಾನಗಳ ಸಂಚಾರಕ್ಕೆ ಜುಲೈ 2020ರಲ್ಲಿ ಅವಕಾಶ ನೀಡಲಾಗಿತ್ತು.