Saturday, 23rd November 2024

ಪಂಜಾಬ್‌ನಲ್ಲಿ ಎಎಪಿ ಗದ್ದುಗೆಯತ್ತ

ಚಂಡೀಗಢ: ಪಂಜಾಬ್‌ನಲ್ಲಿ ಎಎಪಿ ಗದ್ದುಗೆಯನ್ನು ಪಡೆಯುವತ್ತ ಹೆಜ್ಜೆ ಇರಿಸಿರುವಂತೆ ಕಂಡು ಬಂದಿದೆ.

ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59 ಆಗಿದ್ದು, ಎಎಪಿ 84 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಪಂಜಾಬ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಎಎಪಿ ಅಧಿಕಾರ ಪಡೆಯುವ ಭರವಸೆ ವ್ಯಕ್ತಪಡಿಸಿದೆ. ಪಂಜಾಬ್‌ನಲ್ಲಿ ಪಕ್ಷವು ಬಹುಮತದ ಗಡಿ ದಾಟುತ್ತಿದ್ದಂತೆ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್‌ರ ಸಂಗ್ರೂರ್‌ನಲ್ಲಿರುವ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಲಾ ಗುತ್ತಿದೆ. ಮಾನ್ ತಮ್ಮ ಸ್ಥಾನ ಧುರಿಯಿಂದ ಮುನ್ನಡೆಯಲ್ಲಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಮುನ್ನಡೆ ಸಾಧಿಸಿರುವ ನಡುವೆ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಹಿನ್ನಡೆ ಸಾಧಿಸಿದ್ದಾರೆ. ಆರಂಭಿಕವಾಗಿ ಹಾಲಿ ಸಿಎಂ, ಕಾಂಗ್ರೆಸ್‌ನ ಪಂಜಾಬ್‌ ಸಿಎಂ ಅಭ್ಯರ್ಥಿ ಚರಣ್‌ಜೀತ್‌ ಸಿಂಗ್‌ ತಾನು ಸ್ಪರ್ಧಿಸಿರುವ ಭದೌರ್ ಕ್ಷೇತ್ರದಲ್ಲಿ ಹಾಗೂ ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರು. ಈಗ ಹಿನ್ನೆಡೆ ಸಾಧಿಸಿದ್ದಾರೆ. ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಕೂಡಾ ಹಿನ್ನಡೆ ಸಾಧಿಸಿದ್ದಾರೆ.

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. 2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ.