Thursday, 24th October 2024

4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 104 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515459 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 44488 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6554 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 42420120 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,79,53,95,649 ಡೋಸ್ ಲಸಿಕೆ ಹಾಕಲಾಗಿದೆ.