ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದಂತಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,503 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,93,494ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರ ಸಂಖ್ಯೆ 5,15,877ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 36,168ಕ್ಕೆ ಇಳಿಕೆಯಾಗಿದೆ
ಕಳೆದ 24 ಗಂಟೆಗಳಲ್ಲಿ 4,377 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,41,449ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,80,13,23,547 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.