ಬೆಂಗಳೂರು: ಹೈಕೋರ್ಟ್‌ನಲ್ಲಿ ಮಂಗಳವಾರ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸ ಲಾಗಿದೆ.
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು.
ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿರ ಲಿದ್ದಾರೆ.
ಹೈಕೋರ್ಟ್‌ನಲ್ಲಿ ಹಿಜಾಬ್ ತೀರ್ಪು ಪ್ರಕಟಿಸುವ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿ ಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಹಿಜಾಬ್ ಪ್ರಕರಣದ ತೀರ್ಪು ಹೈಕೋರ್ಟ್‌ನಿಂದ ಹೊರಬೀಳುವ ಹಿನ್ನೆಲೆ ತುಮಕೂರು, ಮೈಸೂರು ಮತ್ತು ಕಲಬುರಗಿ ಜಿಲ್ಲೆ ಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಮಾ.18ರವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ಮಾರ್ಚ್ 21 ರವರೆಗೆ ಸೆಕ್ಷನ್ 144 ಜಾರಿ ಗೊಳಿಸಲಾಗಿದೆ.