ನವದೆಹಲಿ: ತರಗತಿಗಳಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಜಾರಿ ಮಾಡಿರುವ ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿ ಯರು ಪಾಲಿಸಬೇಕು ಎಂದು ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸ್ವಾಗತಿಸಿದ್ದಾರೆ.
ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ತಮ್ಮ ಇಚ್ಛೆಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವ ಹಕ್ಕಿದೆ. ಆದರೆ, ತರಗತಿಗಳಲ್ಲಿ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗಳು ಜಾರಿಗೊಳಿಸಿರುವ ವಸ್ತ್ರ ಸಂಹಿತೆಯನ್ನು ಅನುಸರಿಸ ಬೇಕು’ ಎಂದಿದ್ದಾರೆ.
ಹಿಜಾಬ್ ವಿವಾದದ ಕುರಿತಂತೆ ತೀರ್ಪು ಪ್ರಕಟಿಸಿದ ಹೈಕೋರ್ಟ್, ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ.
ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರ ವಿಲ್ಲ’ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.