ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಬುಧವಾರ ಬೆಳಿಗ್ಗೆ 24 ಗಂಟೆಗಳ ಅವಧಿಯಲ್ಲಿ ಕೇವಲ 1,778 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 62 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮೃತಪಟ್ಟವರ ಸಂಖ್ಯೆ 5,16,605ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,087ಕ್ಕೆ ಇಳಿಕೆಯಾಗಿದೆ. ಈ ನಡುವೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,73,057ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,81,89,15,234 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.