ಡೆಹ್ರಾಡೂನ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ಮುಖ್ಯಮಂತ್ರಿ ಯಾಗಿ ಸತತ ಎರಡನೇ ಅವಧಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಡೆಹ್ರಾಡೂನ್ನ ಪರೇಡ್ ಮೈದಾನದಲ್ಲಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಬಿಜೆಪಿಯ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದರು.
ಧಾಮಿ ಸೋಮವಾರ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ತಿರಥ್ ಸಿಂಗ್ ರಾವತ್ ಅವರ ಉತ್ತರಾಧಿಕಾರಿಯಾಗಿ ಕಳೆದ ವರ್ಷ ಜುಲೈ 4 ರಂದು ಧಾಮಿ ಸಿಎಂ ಅಧಿಕಾರ ವಹಿಸಿಕೊಂಡರು.