ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,685 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 83 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,16,372ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,16,755ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,530ಕ್ಕೆ ಇಳಿಕೆಯಾಗಿದೆ
ಈ ನಡುವೆ ಕಳೆದ 24 ಗಂಟೆಗಳಲ್ಲಿ 2499 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,78,087ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,82,55,75,126 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.