Friday, 20th September 2024

100ಕ್ಕೂ ಹೆಚ್ಚು ಬೀದಿ ನಾಯಿಗಳ ಹತ್ಯೆ

ಹೈದರಾಬಾದ್‌: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡಲಾಗಿದೆ.

ಈ ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಎಂಬವರು ಈ ಬಗ್ಗೆ ದೂರು ಸಲ್ಲಿಕೆ ಮಾಡಿದ್ದಾರೆ.

ಸಿದ್ದಿಪೇಟೆ ಜಿಲ್ಲೆಯ ಜಗದೇವಪುರ ಮಂಡಲದ ತಿಗುಲ್ ಗ್ರಾಮದಲ್ಲಿ ನಾಯಿಗಳ ಸಾಮೂಹಿಕ ಹತ್ಯೆ ನಡೆದಿದೆ ಎಂಬ ಆರೋಪ ವನ್ನು ಪ್ರಾಣಿ ಹಕ್ಕುಗಳ ಕಾರ್ಯಕರ್ತ ಗೌತಮ್ ಮಾಡಿದ್ದಾರೆ.

ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಈ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿಸಿದ್ದಾರೆ ಎಂದು ದೂರಿದ್ದಾರೆ. ಗ್ರಾಮದ ಸರಪಂಚ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೃತ್ತಿಪರ ನಾಯಿ ಹಿಡಿಯುವವರನ್ನು ನೇಮಿಸಿ ಬೀದಿ ನಾಯಿ ಗಳಿಗೆ ಮಾ.27ರಂದು ವಿಷ ಚುಚ್ಚುಮದ್ದು ನೀಡಿ ಕೊಂದು ಹಾಕಿದ್ದಾರೆ.