ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾ ಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸೋಮವಾರ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಅರವಿಂದ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಕರ್ನಾಟಕದ ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಭಾಸ್ಕರ್ ರಾವ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಗೊಂಡರು.
1990ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರಿದ್ದ ಭಾಸ್ಕರ್ ರಾವ್, ಸದ್ಯ ರೈಲ್ವೆ ಪೊಲೀಸ್ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸು ತ್ತಿದ್ದರು. 2021ರ ಸೆಪ್ಟೆಂಬರ್‌ನಲ್ಲಿ ಸ್ವಯಂ ನಿವೃತ್ತಿ ಬಯಸಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಸರ್ಕಾರ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಎಎಪಿಯಲ್ಲಿ ರಾಜಕೀಯ ಭವಿಷ್ಯದ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ.
ಬಿ. ಭಾಸ್ಕರ್ ರಾವ್ ಮೂಲತಃ ಬೆಂಗಳೂರಿನವರಾಗಿದ್ದು, 1990ರಲ್ಲಿ ಭಾರತೀಯ ಪೊಲೀಸ್ ಸೇವೆಗೆ ಸೇರ್ಪಡೆಯಾಗಿದ್ದರು.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಗಡಿ ರಾಜ್ಯ ಪಂಜಾಬ್‌ನಲ್ಲಿ ಅಧಿಕಾರ ಹಿಡಿದ ಬಳಿಕ ಭಾರೀ ಹುಮ್ಮಸ್ಸಿನಲ್ಲಿ ರುವ ಆಮ್ ಆದ್ಮಿ ಪಕ್ಷ ಈಗ ಕರ್ನಾಟಕದ ಮೇಲೆ ಕಣ್ಣಿಟ್ಟಿದೆ.