Saturday, 23rd November 2024

1,213 ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿ ಯಲ್ಲಿ 1,213 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 43 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,33,171ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,21,573ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,492ಕ್ಕೆ ಇಳಿಕೆಯಾಗಿದೆ

ಕಳೆದ 24 ಗಂಟೆಗಳಲ್ಲಿ 1,213 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,00,002ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,20,72,469 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.