Saturday, 23rd November 2024

949 ಕೋವಿಡ್ ಪ್ರಕರಣಗಳು ಪತ್ತೆ

#corona

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ದೇಶದಲ್ಲಿ ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 949 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,39,972ಕ್ಕೆ ಏರಿಕೆ ಯಾಗಿದೆ.

ಅಲ್ಲದೇ, ಮೃತಪಟ್ಟವರ ಸಂಖ್ಯೆ 521,743ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,191ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 810 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,07,038ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,86,22,76,304 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.