Saturday, 23rd November 2024

ಲಾಲು ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

139.5 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಲಾಲು ಯಾದವ್ ತಪ್ಪಿತಸ್ಥರು ಎಂದು ಸಾಬೀತಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಉಳಿದ ಅಪರಾಧಿಗಳಲ್ಲಿ ಒಬ್ಬರಾಗಿದ್ದರು. ಕಳೆದ ಮೇವು ಹಗರಣದಲ್ಲಿ 99 ಆರೋಪಿಗಳ ಪೈಕಿ 24 ಮಂದಿಯನ್ನು ಖುಲಾಸೆಗೊಳಿಸಲಾಗಿದ್ದು, ಇತರ 46 ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ಹಿಂದೆ ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಹಿರಿಯ ನಾಯಕನಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಲಾಲೂ ಅವಿಭಜಿತ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ದೊರಾಂಡಾ ಖಜಾನೆಯಿಂದ 139.35 ಕೋಟಿ ರೂ.ಗಳನ್ನು ಹಿಂತೆಗೆದು ಕೊಂಡಿದ್ದಕ್ಕೆ ಸಂಬಂಧಿಸಿದ ಅಂತಿಮ ಪ್ರಕರಣ ಇದಾಗಿದೆ.

22 ವರ್ಷಗಳ ಸುದೀರ್ಘ ವಿಚಾರಣೆಯ ಅವಧಿಯಲ್ಲಿ 55 ಆರೋಪಿಗಳು ಮೃತಪಟ್ಟರೆ, ಆರು ಆರೋಪಿಗಳು ಇನ್ನೂ ತಲೆಮರೆಸಿ ಕೊಂಡಿದ್ದಾರೆ.