ಚಾಮರಾಜನಗರ,
ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತೆ ಕುರಿತು ಪರಿಶೀಲನಾ ಸಭೆಯನ್ನು ನಡೆಸಿದರು.
ಮಾಜಿ ಸಚಿವ, ಶಾಸಕ ಎನ್ ಮಹೇಶ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯ ಬಳಿಕ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಜನರು ಯಾವುದೇ ಆತಂಕಕ್ಕೆ ಒಳಗಾಗ ಬಾರದು ಎಂದು ಮನವಿ ಮಾಡಿಕೊಂಡ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು, ಕೊರೊನಾ ವೈರಸ್ ಹರಡದಂತೆ ತಡೆಯಲು ರಚಿಸಲಾಗಿರುವ ಟಾಸ್ಕ್ ಫೋರ್ಸ್ ಟೀಂ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ನಡೆಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಈವರೆಗೆ ಕೋವಿಡ್-19 ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಮುಂಜಾಗ್ರತೆ ವಹಿಸಿ ಯಾವ ಕಾರಣಕ್ಕೂ ರೋಗ ಹರಡದಂತೆ ಶ್ರಮಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವರಾದ ಶ್ರೀರಾಮುಲು ಅವರು ಸೂಚಿಸಿ, ಜನರಲ್ಲಿ ಸೂಕ್ತ ಅರಿವು ಮೂಡಿಸುವಂತೆ ಹೇಳಿದರು.