ನವದೆಹಲಿ: ದೇಶದಲ್ಲಿ ಕರೋನಾ 4ನೇ ಅಲೆ ಆತಂಕದ ನಡುವೆ ಬುಧವಾರ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,23,920 ಕ್ಕೆ ಏರಿಕೆಯಾಗಿದೆ.