ಚೆನ್ನೈ: ಒಂದು ಸಾವಿರ ವರ್ಷಗಳಷ್ಟು ಹಳೆಯದಾದ 80 ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲು ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ಧರಿಸಿದೆ.
ರಾಜ್ಯ ಸರ್ಕಾರವು ಹಿಂದೂಗಳ ವಿರೋಧಿ ಅಲ್ಲ, ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿಲ್ಲ ಎಂದು ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ. ರಾಜ್ಯದ ಆರು ದೇವಸ್ಥಾನಗಳಿಗೆ ₹ 27.70 ಕೋಟಿ ವೆಚ್ಚದಲ್ಲಿ ರಾಜಗೋಪುರ ನಿರ್ಮಾಣ ಮತ್ತು 10 ದೇವಸ್ಥಾನ ಗಳಲ್ಲಿ ‘ಅನ್ನದಾನ’ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
₹ 11 ಕೋಟಿ ವೆಚ್ಚದಲ್ಲಿ 14 ದೇವಸ್ಥಾನಗಳಲ್ಲಿ ನೂತನ ಅನ್ನದಾನ ಭವನಗಳನ್ನು ನಿರ್ಮಿಸಲಾಗುವುದು. ಎಲ್ಲ ಭಕ್ತರಿಗೆ ಪ್ರಸಾದ ನೀಡುವ ಯೋಜನೆ ಯನ್ನು ಐದು ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಕೋವಿಲ್ ಪಥಗಾಯ್ ಸುಂದರರಾಜ ಪೆರುಮಾಳ್ ದೇವಸ್ಥಾನದಲ್ಲಿ ಬೃಹತ್ ಗೋಶಾಲೆ ಸ್ಥಾಪಿಸಲಾಗುವುದು. ಯೋಜನೆಗೆ ₹ 20 ಕೋಟಿ ಮೀಸಲಿಡ ಲಾಗಿದೆ ಎಂದು ಇಲಾಖೆ ತಿಳಿಸಿದೆ. ಇಲಾಖೆ ಈಗಿರುವ 121 ಗೋಶಾಲೆಗಳನ್ನು 20 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಿದೆ.