ನವದೆಹಲಿ: ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ.
ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ. ಗುರುವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 29 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು.
ಭಾರತದಲ್ಲೇ ಅತ್ಯಧಿಕ ಇಂಧನ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಪೆಟ್ರೋಲ್ 123.16 ರು ಪ್ರತಿ ಲೀಟರ್ ಹಾಗೂ ಡೀಸೆಲ್ 105.55 ರು ನಷ್ಟಿದೆ.
ದೆಹಲಿಯಲ್ಲಿ
ಪೆಟ್ರೋಲ್ ದರ : 105.41 ರೂ.
ಡೀಸೆಲ್ : 96.67 ರೂ.
ಬೆಂಗಳೂರು
ಪೆಟ್ರೋಲ್ ದರ : 111.09 ರೂ.
ಡೀಸೆಲ್ : 94.79 ರೂ.
ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 110.5 ಯುಎಸ್ ಡಾಲರ್ ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರ ನೀಡುತ್ತವೆ.