Tuesday, 26th November 2024

3,545 ಕೋವಿಡ್ ಪ್ರಕರಣಗಳು ಪತ್ತೆ, 27 ಮಂದಿ ಸಾವು

#corona

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,545 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 27 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,94,938ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,002ಕ್ಕೆ ಏರಿಕೆಯಾಗಿದೆ.  ಈ ನಡುವೆ ಕಳೆದ 24 ಗಂಟೆಗಳಲ್ಲಿ 3,549 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,51,248ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,89,81,52,695 ಜನರಿಗೆ ಲಸಿಕೆ ನೀಡಲಾಗಿದೆ.