ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ ಬೆಲೆ (14.2 ಕೆಜಿ ತೂಕದ ಸಿಲಿಂಡರ್) 50 ರೂಪಾಯಿ ಹೆಚ್ಚಳವಾಗಿದ್ದು ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.
ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆ ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ. ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು.
ಮೇ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು ಉಜ್ವಲ ದಿವಸ ಕಾರ್ಯಕ್ರಮ ಸಂದರ್ಭದಲ್ಲಿ 5 ಸಾವಿರಕ್ಕೂ ಹೆಚ್ಚು LPG ಪಂಚಾಯತ್‌ಗಳನ್ನು ಆಯೋಜಿಸಿದ್ದವು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಉಚಿತ ಎಲ್‌ಪಿಜಿ ಸಂಪರ್ಕವನ್ನು ಒದಗಿಸುವ ಮೂಲಕ ಸಾಮಾಜಿಕ ಒಳಗೊಳ್ಳುವಿಕೆಯತ್ತ ಒಂದು ಹೆಜ್ಜೆಯಾಗಿದೆ. ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ, ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಆರಂಭಿಸಿದ್ದರು.