Saturday, 26th October 2024

ಕರೋನಾ ಸಂಬಂಧ ಕಾಂಗ್ರೆಸ್ ನಾಯಕರ ಸಭೆ

ಕೊರೊನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಎಚ್. ಎಂ. ರೇವಣ್ಣ, ದಿನೇಶ್ ಗುಂಡೂರಾವ್, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್. ಉಗ್ರಪ್ಪ ಭಾಗವಹಿಸಿದ್ದರು.