ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 2858 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ದೇಶದಲ್ಲಿ ಒಂದು ದಿನದಲ್ಲಿ ಮಹಾಮಾರಿಯಿಂದ 11 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 3,355 ಸೋಂಕಿತರು ಗುಣಮುಖ ರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೂ 4,25,76,815 ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,201 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ.
ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 18,096 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 15,04,734 ಮಂದಿಗೆ ಲಸಿಕೆ ನೀಡಲಾಗಿದ್ದು, ಈವರೆಗೂ 1,91,15,90,370 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ.