ಭಾರ್ತಿ ಅವರು ಹಳೇ ವಿಡಿಯೊವೊಂದರಲ್ಲಿ ಸಿಖ್ಖರ ಮೀಸೆ ಮತ್ತು ಗಡ್ಡದ ಕುರಿತು ಅಪಹಾಸ್ಯ ಮಾಡಿದ್ದಾರೆ. ಆ ಮೂಲಕ ಸಿಖ್ ಸಮುದಾಯದವರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಮೃತಸರದಲ್ಲಿರುವ ‘ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ’ಯೂ ದೂರು ದಾಖಲಿಸಿದೆ ಎಂದು ವರದಿಯಾಗಿದೆ.
ವಿವಾದ ಸೃಷ್ಟಿ ಬಳಿಕ ಭಾರ್ತಿ ಅವರ ಹಳೇ ವಿಡಿಯೊ ವೈರಲ್ ಆಗಿದೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಭಾರ್ತಿ, ಕ್ಷಮೆ ಯಾಚಿಸಿ ಮತ್ತೊಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಮುದಾಯದವರಿಗೆ ನೋವುಂಟು ಮಾಡುವುದು ತಮ್ಮ ಉದ್ದೇಶವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.