Sunday, 24th November 2024

ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವ ಅಲ್ಕೋಡ ಆರೋಪ

ಸಿರವಾರ : ಜಿಲ್ಲೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ತಾಂಡವ ವಾಡುತ್ತಿದ್ದು , ಆಡಳಿತ ವ್ಯವಸ್ಥೆ ಸಂಪೂರ್ಣ ವಾಗಿ ಕುಸಿದಿದೆ ಎಂದು ಮಾಜಿ ಸಚಿವರು ಮತ್ತು ಕೆಪಿಸಿಸಿ ಪ್ರಧಾನ ವೈ.ಹನುಮಂತಪ್ಪ ಕಾರ್ಯದರ್ಶಿ ಆಲ್ಕೋಡ್ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರದಲ್ಲಿ ಹಿಂದೆಂದೂ ನಡೆಯದ ರೀತಿಯಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ. ಸರಕಾರದ ಇಲಾಖೆಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ಸಕಾಲಕ್ಕೆ ಪೂರ್ಣ ಗೊಳ್ಳದೇ ಹಳ್ಳ ಹಿಡಿಯು ತ್ತಿವೆ. ಸರಕಾರದ ಕೋಟ್ಯಾಂತರ ರೂ.ಲೂಟಿಯಾಗುತ್ತಿದ್ದು, ಉನ್ನತ ಮಟ್ಟದ ತನಿಖೆ ನಡೆಸಲು ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರಕಾರದ ಅವಧಿಯಲ್ಲಿ ಶಿಕ್ಷಣ, ಪದವಿ ಮತ್ತು ಹುದ್ದೆಗಳು ಹಣಕ್ಕೆ ಮಾರಾಟ ಆಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾರಾಯಣಪುರ ಬಲದಂಡೆ ಕಾಲುವೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದಕ್ಕೆ ಸದನ ಸಮಿತಿಯಲ್ಲಿ ಚರ್ಚೆಯಾಗಿ ಕಾಮಗಾರಿ ಸ್ಥಗಿತಗೊಂಡಿರುವುದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಸರಕಾರದ ವಿರುದ್ಧ ಗುಡುಗಿದರು.

ಈ ಸಂದರ್ಭದಲ್ಲಿ ನವಲಕಲ್ ಗ್ರಾ.ಪಂ ಉಪಾಧ್ಯಕ್ಷ ಅಮರೇಶ ಪವರ್‌ ಇದ್ದರು.