ಶಿವಮೊಗ್ಗ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಒಬಿಸಿ ಮೀಸಲಾತಿಯೊಂದಿಗೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನದಂಡ ಅನುಸರಿಸದೇ ಒಬಿಸಿ ಮೀಸಲಾತಿ ನೀಡಬಾರದು ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 15 ದಿನ ಗಳಲ್ಲಿ ಒಬಿಸಿ ಮೀಸಲಾತಿ ವರದಿ ಸಲ್ಲಿಕೆಯಾದಲ್ಲಿ ಅದರಂತೆ ಚುನಾವಣೆ ನಡೆಸಬಹುದು ಎಂದು ಹೇಳಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಅರ್ಜಿ ಸಲ್ಲಿಸಲಾಗಿತ್ತು ಎಂದರು.
ಒಬಿಸಿ ಮೀಸಲಾತಿಗೆ ಕಾಯುವುದು ಬೇಡ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದಡಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಹೇಳಿ ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದ ಬಗ್ಗೆ ರಾಜ್ಯ ಸರ್ಕಾರದಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈಗ ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾ ವಣೆಗೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದ್ದು ಈ ಆದೇಶದೊಂದಿಗೆ ರಾಜ್ಯ ಸರ್ಕಾರ ಮತ್ತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದು, ಒಬಿಸಿ ಮೀಸಲಾತಿ ಯೊಂದಿಗೆ ಚುನಾವಣೆ ನಡೆಸಲು ಮನವಿ ಮಾಡಲಿದೆ ಎಂದು ತಿಳಿಸಿದರು.
2022ರ ಮೇ 10 ರಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿ, 15 ದಿನಗಳ ಒಳಗೆ ಚುನಾವಣೆ ವೇಳಾಪಟ್ಟಿ ಯನ್ನು ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಸಮುಚಿತ ಆಯೋಗದ ವರದಿಯನ್ನು ಕಾಯದೆ ಚುನಾವಣೆ ನಡೆಸುವಂತೆ ಮಧ್ಯಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದು, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದು, ಈ ಬಗ್ಗೆ ಮಧ್ಯಪ್ರದೇಶ ಹಿಂದುಳಿದ ವರ್ಗಗಳ ಆಯೋಗ ಮೇ 12ರಂದು ವರದಿ ಸಲ್ಲಿಸಿ???. ಇದರ ಅನುಸಾರ ಎರಡು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಮಧ್ಯಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅಂತೆಯೇ ಮೇ 10ರ ಆದೇಶವನ್ನು ಮಾರ್ಪಡಿಸಿ ಓಬಿಸಿ ಮೀಸಲಾತಿಗೆ ಅನುಗುಣವಾಗಿ ಸ್ಥಳೀಯ ಮೀಸಲಾತಿ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಅಧಿಸೂಚನೆ ಹೊರಡಿಸಿ ನಂತರ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಲು ಆದೇಶಿಸ ಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರದೇಶಕ್ಕೆ ನೀಡಿದ ಆದೇಶ ಸೇರಿ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಲಿದೆ ಎಂದರು.
ಸೈಕ್ಲೋನ್ ಪರಿಣಾಮದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗದಲ್ಲಿ ಕೂಡ ಅತಿಹೆಚ್ಚು ಮಳೆಯಾಗುತ್ತಿದೆ. ಈ ಮೊದಲೇ ಮುನ್ನೆಚ್ಚರಿಕೆ ಕ್ರಮವಾಗಿ ರಾಜಕಾಲುವೆ, ಯುಜಿಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಮನೆಗೆ ನೀರು ನುಗ್ಗದಂತೆ ಕ್ರಮವಹಿಸಲಾಗಿದೆ. ಹೀಗಿದ್ದರೂ ಇತ್ತೀಚಿನ ವರ್ಷ ಗಳಲ್ಲಿಯೇ ಈ ಬಾರಿ ಮೇ ತಿಂಗಳಲ್ಲಿ ಅತಿಹೆಚ್ಚಿನ ಮಳೆಯಾಗಿರುವ ಕಾರಣ ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ ಎಂದರು.
ಗಾಜನೂರು ತುಂಗಾ ಜಲಾಶಯದಿಂದ 9000 ಕ್ಯೂಸೆಕ್ ನೀರು ಹೊರಬಿಡುತ್ತಿದ್ದು, ನಾಳೆ ನಾಡಿದ್ದು ಹೊರಬಿಡುವ ನೀರಿನ ಪ್ರಮಾಣ ಬಾರಿ ಏರಿಕೆ ಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭಾರಿ ಮಳೆ ಮುನ್ಸೂಚನೆಯ ಕಾರಣ ಮಳೆ ನೀರು ಮನೆಗಳಿಗೆ ನುಗ್ಗುವ ಸಾಧ್ಯತೆ ಹಿನ್ನಲೆಯಲ್ಲಿ ಜನರು ಜಾಗೃತರಾಗಿ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದರು.
ಎಲ್ಬಿಎಸ್ ನಗರ, ಟಿಪ್ಪು ನಗರ, ಬಾಪೂಜಿನಗರ ಮೊದಲಾದ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಪರಿಶೀಲನೆ ನಡೆಸಲಾಗಿದ್ದು ಪರಿಹಾರ ಕಾರ್ಯ ಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.