Tuesday, 26th November 2024

2,259 ಕೋವಿಡ್ ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,259 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,31,822ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,323ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,614 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,92,455ಕ್ಕೆ ತಲುಪಿದೆ. ಭಾರತದಲ್ಲಿ 4,51,179 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84,58,55,351 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,96,32,518 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.