Friday, 22nd November 2024

ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಸೋತ ಸಿಂಧು

ಬ್ಯಾಂಕಾಕ್: ಭಾರತದ ಷಟ್ಲರ್ ಪಿವಿ ಸಿಂಧು ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಸೋತಿದ್ದಾರೆ.

ಶನಿವಾರ ನಡೆದ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಯು ಫೀ 21-17, 21-16 ನೇರ ಸೆಟ್‌ಗಳಿಂದ ಸಿಂಧು ಅವರನ್ನು ಸೋಲಿಸಿದರು.

ಗೇಮ್‌ನ ಆರಂಭಿಕ ಕ್ಷಣಗಳಲ್ಲಿ 10-15 ರಿಂದ ಯು ಫೀಗೆ ಹಿನ್ನಡೆಯಾದ ನಂತರ, ಸಿಂಧು ಪುನರಾಗ ಮನ ಮಾಡಿದರು. ಆದರೆ ಚೀನಿ ಆಟಗಾರ್ತಿ ಮೊದಲ ಗೇಮ್ ಅನ್ನು 21-17 ರಿಂದ ಗೆದ್ದರು.

ಎರಡನೇ ಗೇಮ್‌ನಲ್ಲಿ ಸಿಂಧು 10-5 ರಿಂದ ಮುನ್ನಡೆ ಸಾಧಿಸಲು ಉತ್ತಮವಾಗಿ ಆರಂಭ ಪಡೆದುಕೊಂಡರು. ಆದರೆ ಎದುರಾಳಿ ಗೇಮ್‌ನ ದ್ವಿತೀಯಾ ರ್ಧದಲ್ಲಿ ಮರಳಿ ಸಿಂಧುವನ್ನು 21-16 ರಿಂದ ಸೋಲಿಸಿ ಫೈನಲ್‌ಗೆ ಮುನ್ನಡೆದರು.

ಈ ಸೋಲಿನೊಂದಿಗೆ ಸಿಂಧು ಥಾಯ್ಲೆಂಡ್ ಓಪನ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ಫೈನಲ್‌ನಲ್ಲಿ ಯು ಫೀ ತೈವಾನ್‌ನ ತೈ ತ್ಸು ಯಿಂಗ್ ಅಥವಾ ಥಾಯ್ಲೆಂಡ್‌ನ ರಚನೋಕ್ ಇಂಟನಾನ್ ಅವರನ್ನು ಎದುರಿಸಲಿದ್ದಾರೆ.