Friday, 22nd November 2024

ಎಕ್ಸೈಸ್‌ ಸುಂಕ ಕಡಿತ: ರಾಜಸ್ಥಾನ, ಕೇರಳ, ಒಡಿಶಾದಲ್ಲೂ ವ್ಯಾಟ್ ಕಡಿತ

ಜೈಪುರ: ಕೇಂದ್ರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕ ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ, ಕೇರಳ ಮತ್ತು ಒಡಿಶಾ ಸರ್ಕಾರಗಳೂ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿತ ಮಾಡಿವೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌, ‘ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಸುಂಕ ಕಡಿತಗೊಳಿಸಿರುವು ದರಿಂದ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲೆ ಲೀಟರ್‌ಗೆ 2.48ರೂ ಮತ್ತು ಡೀಸೆಲ್‌ಗೆ 1.16 ರೂರಷ್ಟು ವ್ಯಾಟ್ ಕಡಿಮೆ ತಗ್ಗಿಸಲಿದೆ ಎಂದು ತಿಳಿಸಿದರು.

ರಾಜಸ್ಥಾನದ ಬೆನ್ನಲ್ಲೇ ಕೇರಳ ಸರ್ಕಾರ ಮತ್ತು ಒಡಿಶಾ ಸರ್ಕಾರಗಳೂ ಪೆಟ್ರೋಲ್‌ ಮೇಲಿನ ರಾಜ್ಯ ತೆರಿಗೆಯನ್ನು ಕಡಿತ ಮಾಡಿದ್ದು, ಕೇರಳ ಲೀಟರಿಗೆ 2.41 ರೂ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಲೀಟರಿಗೆ 1.36 ರೂ ಇಳಿಕೆ ಮಾಡಿದೆ.

ಒಡಿಶಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ ಕ್ರಮವಾಗಿ 2.23 ಮತ್ತು 1.36 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ 8ರೂ ಮತ್ತು 6ರೂ ಕಡಿತ ಮಾಡಿತ್ತು.