ನವದೆಹಲಿ: ಪಾಕಿಸ್ತಾನದ ಮಹಿಳಾ ಏಜೆಂಟ್ ಜೊತೆ ಹನಿಟ್ರ್ಯಾಪ್ನಲ್ಲಿ ಸಿಲುಕಿ ಭಾರತೀಯ ಸೇನೆಯ ಗೌಪ್ಯ ಮಾಹಿತಿ ಮತ್ತು ಕಾರ್ಯತಂತ್ರದ ಮಾಹಿತಿ ಹಂಚಿ ಕೊಂಡಿದ್ದಕ್ಕಾಗಿ ಯೋಧನೋರ್ವನ ಬಂಧಿಸಲಾಗಿದೆ.
ಭಾರತೀಯ ಯೋಧ ಪ್ರದೀಪ್ ಕುಮಾರ್ ಪಾಕಿಸ್ತಾನ ಗುಪ್ತಚರ ಇಲಾಖೆಯ ಮಹಿಳಾ ಏಜೆಂಟ್ ಜೊತೆ ಸಂಪರ್ಕದಲ್ಲಿದ್ದರು.
ಮಹಿಳಾ ಏಜೆಂಟ್ ಜೊತೆ ಫೇಸ್ಬುಕ್ ಮತ್ತು ವಾಟ್ಸಾಪ್ ಮೂಲಕ ಸಂಪರ್ಕ ಸಾಧಿಸಿರುವ ಯೋಧ, ಗೌಪ್ಯ ಮಾಹಿತಿ ಹಂಚಿ ಕೊಂಡಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಯೋಧನ ಮೊಬೈಲ್ಗೆ ಕರೆ ಮಾಡಿರುವ ಮಹಿಳೆ ತಾನು ಬೆಂಗಳೂರಿನ ಮಿಲಿಟರಿ ನರ್ಸಿಂಗ್ ಸೇವಾ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದಾಳೆ.
ಜೊತೆಗೆ ದೆಹಲಿಯಲ್ಲಿ ತನ್ನನ್ನು ಭೇಟಿಯಾಗುವಂತೆ ಹಾಗೂ ಮದುವೆ ಮಾಡಿಕೊಳ್ಳುವಂತೆ ಪ್ರಸ್ತಾಪ ಇಟ್ಟಿದ್ದಳು.