Tuesday, 26th November 2024

1,675 ಕೋವಿಡ್ ಪ್ರಕರಣಗಳು ಪತ್ತೆ

#corona

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,675 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,40,068ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,841ಕ್ಕೆ ತಲುಪಿದೆ. ಕೇರಳದಲ್ಲಿ ಕೋವಿಡ್ 19 ಸೋಂಕಿನಿಂದ 31 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,24,490ಕ್ಕೆ ಹೆಚ್ಚಳವಾಗಿದೆ.

ದೇಶಾದ್ಯಂತ ಈವರೆಗೆ 84.74 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ 192.52 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.