Tuesday, 22nd October 2024

ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕೈ ಟಿಕೆಟ್‌

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಸ್ಥಾನ ನೀಡುವ ಮೂಲಕ ‘ಕೈ’ ಪಕ್ಷ ಅಚ್ಚರಿ ಮೂಡಿಸಿದೆ.

ಅಭ್ಯರ್ಥಿಗಳು ಮಂಗಳವಾರ ವಿಧಾನ ಪರಿಷತ್ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ಮೂಲದ ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾ ಧ್ಯಕ್ಷ. ಈ ಹಿಂದೆ ಪರಿಷತ್ ಸದಸ್ಯರಾಗಿದ್ದರು. ನಾಗರಾಜ್ ಯಾದವ್ ಅವರು ಕೆಪಿಸಿಸಿ ವಕ್ತಾರರಾಗಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದ ಹೆಸರುಗಳನ್ನು ಬಿಟ್ಟು ಬೇರೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅಚ್ಚರಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.

ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರಿಗೆ ಅವಕಾಶ ನೀಡುವಂತೆ ಸಿದ್ದರಾಮಯ್ಯ ನವರು ಕೇಳಿದ್ದರು. ಹಿಂದುಳಿದ ವರ್ಗಗಳ ಪೈಕಿ ಬಲಿಜ‌ ಸಮುದಾಯದ ಎಂ.ಆರ್. ಸೀತಾರಾಂ ಮತ್ತು ಅಲ್ಪಸಂಖ್ಯಾತರ ಪರ ಕ್ರಿಶ್ಚಿಯನ್ ಸಮುದಾಯದ ಐವಾನ್ ಡಿಸೋಜಾರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.

ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿ ವರಿಷ್ಠರ ಭೇಟಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ವರಿಷ್ಠರ ಸಮ್ಮುಖದಲ್ಲಿಯೇ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಕೊನೆಗೆ ಅಂತಿಮ ಪಟ್ಟಿಯ ಸ್ಪಷ್ಟತೆ ಇಲ್ಲದೆ ಬರಿಗೈಲಿ ವಾಪಸ್ಸಾಗಿ ದ್ದರು.