Thursday, 19th September 2024

ಸಫ್ಧರ್’ಜಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ನವದೆಹಲಿ: ನವದೆಹಲಿಯ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಶುಕ್ರವಾರ ಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಅಗ್ನಿ ಶಾಮಕ ದಳಕ್ಕೆ ತಕ್ಷಣ ಮಾಹಿತಿ ನೀಡಲಾಗಿದೆ. 5 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಆಗಮಿಸಿವೆ.

ಸಫ್ಧರ್ ಜಂಗ್ ಆಸ್ಪತ್ರೆ ದೆಹಲಿ ನಗರದ ಪ್ರಮುಖ ಆಸ್ಪತ್ರೆಯಾಗಿದೆ. ಅಗ್ನಿ ಆಕಸ್ಮಿಕದಿಂದ ರೋಗಿಗಳಿಗೆ ಯಾವುದೇ ತೊಂದರೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.