Saturday, 23rd November 2024

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ.

ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ ನಡೆಯುತ್ತಿತ್ತು. ಬ್ಯಾಂಡ್ ಹಾಕಿ ವಧು-ವರರನ್ನು ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆ ಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿ ದ್ದರು.

ಈ ವೇಳೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ. ವಧು-ವರರು ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದ್ದು, ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆರವಣಿಗೆಯಲ್ಲಿ ಐವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದು, ದೂರು ನೀಡಿದರೂ ಎಂಇಎಸ್ ಪುಂಡರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಎಂಇಎಸ್ ಪುಂಡರ ಈ ಧೋರಣೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾ ಗಿದೆ.