ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,308ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 33 ಮಂದಿ ಮೃತಪಟ್ಟಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,24,572ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 494 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತ ದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಮತ್ತೊಂದೆಡೆ, ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,09,335ಕ್ಕೆ ಏರಿಕೆಯಾಗಿದೆ.