Saturday, 23rd November 2024

ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ. ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌ ಎಂದು ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ದಾರ್ಶನಿಕರು, ಹೋರಾಟಗಾರರ ಪಠ್ಯ ಕೈಬಿಟ್ಟಿದ್ದಾರೆ. ಸಾಣೆಹಳ್ಳಿ‌ಶ್ರೀಗಳು, ಆದಿ ಚುಂಚನಗಿರಿ ಶ್ರೀಗಳು ವಿರೋಧ ವ್ಯಕ್ತ ಪಡಿಸಿ ದ್ದಾರೆ. ಕುವೆಂಪು,ಬಸವಣ್ಣನವರ ಪಾಠ ಕೈಬಿಟ್ಟಿದ್ದು ಸರಿಯಲ್ಲ. ಕೂಡಲೇ ಪಾಠಗಳಲ್ಲಿ ಸೇರಿಸುವಂತೆ ಒತ್ತಾಯಿಸಿದ್ದಾರೆ

ಆರ್ ಎಸ್ ಎಸ್ ಅಣತಿಯಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ನಾಗಪುರ,ಹಾವಿನಪುರದ ಒತ್ತಡಕ್ಕೆ ಸರ್ಕಾರ ಮಣಿದಿದೆ. ಸರ್ಕಾರ ಹಿಡನ್ ಅಜೆಂಡಾ ಜಾರಿಗೆ ತರುತ್ತಿದೆ. ಇದಕ್ಕೆ ನಮ್ಮದು ತೀವ್ರ ವಿರೋಧವಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ಹಾಕಿದ್ದಕ್ಕೆ ಜೆಡಿಎಸ್ ಬೇಸರ ವಿಚಾರಕ್ಕೆ ಜಾತ್ಯಾತೀತ ತತ್ವದ ಮೇಲೆ ಅಭ್ಯರ್ಥಿ ಹಾಕಿರಲಿಲ್ಲ. ದೇವೇಗೌಡರ ಹಿರಿತನಕ್ಕೆ ಗೌರವ ಕೊಟ್ಟು ಅವ್ರ ವಿರುದ್ಧ ನಾವು ಇಳಿಸಿರಲಿಲ್ಲ. ಜಾತ್ಯಾತೀತ ತತ್ವದಲ್ಲಿ ಜೆಡಿಎಸ್ ಗೆ ನಂಬಿಕೆ ಇದ್ದರೆ ಮತ ಹಾಕಲಿ ಎಂದು ಜೆಡಿಎಸ್ ಗೆ ಪರೋಕ್ಷ ಸವಾಲೆಸೆದರು.