ಮಹಾರಾಷ್ಟ್ರ : ಕೋವಿಡ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡ ಹಿನ್ನೆಲೆ ಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಗೊಳಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಕಳವಳ ವ್ಯಕ್ತಪಡಿಸಿದ್ದು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವ್ಯಾಸ್ ಅವರು, ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಪತ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಸೇರಿದಂತೆ ಹಲವು ಆದೇಶಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.
ರೈಲುಗಳು, ಬಸ್‌ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಹೇಳಿದರು. ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಸ್ಥಿರವಾಗಿದ್ದವು. ಆದರೆ ಕೆಲ ದಿನಗಳಿಂದ ಕೇಸ್ಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಮೊದಲ ಬಾರಿಗೆ ದೈನಂದಿನ ಪ್ರಕರಣಗಳು ಸಾವಿರ ಗಡಿ ದಾಟಿವೆ.